ನವದೆಹಲಿ: ಇಂಗ್ಲೆಂಡ್ ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ಬರುವ ವಿಮಾನಗಳಿಗೆ ಇದೇ ಡಿ. 31ರವರೆಗೆ ಕೇಂದ್ರ ಸರ್ಕಾರ ನಿರ್ಬಂಧ ಹಾಕಿದೆ.
ಬ್ರಿಟನ್ ನಲ್ಲಿ ಹೊಸ ನಮೂನೆಯ ಕೊರೊನಾ ವೈರಸ್ ಪತ್ತೆಯಾಗಿದೆ. ಇದರಿಮದ ಆತಂಕ ಸೃಷ್ಟಿಯಾಗಿದೆ.
ಹಾಗಾಗಿ ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಗಳನ್ನು ಸಧ್ಯದ ಪರಿಸ್ತಿತಿಯಲ್ಲಿ ರದ್ದುಗೊಳಿಸಲಾಗಿದೆ.
ಈ ಹೊಸ ವೈರಸ್ ಪ್ರಸ್ತುತ ವೈರಸ್ ಗಿಂತ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ತಜ್ಞರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ, ಈ ಹೊಸ ವೈರಸ್ ಸೋಂಕಿನ ಕುರಿತು ಭಾರತೀಯರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಗಳಿಗೆ ನಿರ್ಬಂಧ

