ಮೈಸೂರು: ಸಂಸದ ಶ್ರೀನಿವಾಸ್ ಪ್ರಸಾದ್ ಕೇವಲ ಒಣ ರಾಜಕೀಯ ಮಾಡುವುದರಲ್ಲಿ ಮಗ್ನರಾಗಿದ್ದಾರೆ ಎಂದು ಮಾಜಿ ಸಚಿವ ಡಾ.ಹೆಚ್ ಸಿ.ಮಹದೇವಪ್ಪ ತಿಳಿಸಿದ್ದಾರೆ.
ಶ್ರೀನಿವಾಸ ಪ್ರಸಾದ ಅವರ ವಿರುದ್ಧ ಟ್ವೀಟ್ ಮಾಡಿರುವ ಮಹದೇವಪ್ಪ ಅವರು, ಸಂಸದ ಶ್ರೀನಿವಾಸ ಪ್ರಸಾದ್ ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆ ಮಾಡಿದ್ದಾರೆಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆ ಮಾಡಿರುವ ಶ್ರೀನಿವಾಸ ಪ್ರಸಾದ್ ಬಾಬಾ ಸಾಹೇಬರ ಶ್ರಮದಿಂದ ದೊರೆತ ಅಧಿಕಾರದ ಉದ್ದೇಶ ಹಾಗೂ ಅದರ ಮಹತ್ವವನ್ನು ಅವರು ಹಾಳು ಮಾಡುತ್ತಿದ್ದಾರೆಂದಿದ್ದಾರೆ.
ನಂಜನಗೂಡು ಉಪ ಚುನಾವಣೆಯಲ್ಲಿ ನಾನು ಮತ್ತು ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್ ಅವರನ್ನು ಸೋಲಿಸಿದೆವು ಎಂದು ಪ್ರಸಾದ್ ಹೇಳಿದ್ದಾರೆ. ಹಾಗಿದ್ದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬಿಟ್ಟು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಪ್ರಸಾದ್ ಅವರನ್ನು ಗೆಲ್ಲಿಸಬೇಕಾಗಿತ್ತೇ ಎಂದು ಮಹದೇವಪ್ಪ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಒಣ ರಾಜಕೀಯ ಮಾಡುವುದರಲ್ಲಿ ಮಗ್ನ -ಮಾಜಿ ಸಚಿವ ಮಹದೇವಪ್ಪ

