ನವದೆಹಲಿ: ಹೊಸ ವರ್ಷದ ಮೊದಲ ದಿನವಾದ ಜ. 1ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
2021ರ ಜ. 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಇನ್ನು ಮುಂದಿನ ದಿನಗಳಲ್ಲಿ ಟೋಲ್ ಗಳಲ್ಲಿ ನಗದು ರಹಿತ ವಹಿವಾಟಿಗೆ ಕೇಂದ್ರ ಸರಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ
2021ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದೆ.
ಒಂದು ವೇಳೆ ವಾಹನಗಳು ಫಾಸ್ಟ್ ಟ್ಯಾಗ್ ಹೊಂದಿಲ್ಲದಿದ್ದರೆ ದುಪ್ಪಟ್ಟು ಹಣ ತೆರಬೇಕಾಗುತ್ತದೆ.
ಡಿ. 31ರ ಮಧ್ಯರಾತ್ರಿಯಿಂದಲೇ ನಗದು ಶುಲ್ಕ ವ್ಯವಸ್ಥೆ ರದ್ದಾಗಲಿದೆ.
ಜ. 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ

