ವಾಜಪೇಯಿ ಜನ್ಮದಿನದ ನಿಮಿತ್ತ ಉತ್ತಮ ಆಡಳಿತ ದಿನ ಆಚರಣೆ
ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳುವ ಉದ್ದಶದಿಂದ ಖಾಸಗಿ ಹಾಗೂ ಸಾರ್ವಜನಿಕ ಸ್ವಾಮ್ಯದ ಎಂಜಿನಿಯರಿಂಗ್, ಡಿಪೆÇ್ಲಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಉತ್ತಮ ಆಡಳಿತ ದಿನ (ಗುಡ್ ಗವರ್ನೆನ್ಸ್ ಡೇ) ಕಾರ್ಯಕ್ರಮವನ್ನು ಉದ್ಘಾಟಿಸಿ ಡಿಸಿಎಂ ಮಾತನಾಡಿದರು.
ಸಮಾಜದ ಎಲ್ಲ ಸವಾಲುಗಳನ್ನು ಎದುರಿಸಲು ಹಾಗೂ ವೈಯಕ್ತಿಕವಾಗಿಯೂ ಯಾವುದೇ ಸಮಸ್ಯೆಯನ್ನು ಮೆಟ್ಟಿ ನಿಲ್ಲಲು ಶಿಕ್ಷಣವೇ ಏಕೈಕ ರಾಜಮಾರ್ಗ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.
ಜಾಗತಿಕ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ, ರಚನಾತ್ಮಕ ಸ್ವಾಯತ್ತತೆ ನೀಡಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲಾಗುತ್ತಿದೆ. ಇದೇ ದಾರಿಯಲ್ಲಿ ನಮ್ಮ ಸರಕಾರವೂ ಹೆಜ್ಜೆ ಇಡಲು ಸಿದ್ಧವಿದೆ ಎಂದು ತಿಳಿಸಿದರು.
ಎಲ್ಲವನ್ನೂ ಸರಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರ ದೂರದೃಷ್ಟಿ, ಆಶಯ ಮತ್ತು ಆಡಳಿತದಂತೆಯೇ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು ಎಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲರನ್ನೂ ಸ್ವಾಗತಿಸಿದ
ಐಟಿಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ. ವಿ. ರಮಣರೆಡ್ಡಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಸ್ಟಾರ್ಟ್‍ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪೆÇ್ರ. ತಿಮ್ಮೇಗೌಡ, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ, ಅ. ದೇವೇಗೌಡ ಮುಂತಾದವರು ಉಪಸ್ಥಿತರಿದ್ದರು.

