ಬೆಂಗಳೂರು: ರಾತ್ರಿ ಕರ್ಫ್ಯೂ ವಿಚಾರ ಯಡಿಯೂರಪ್ಪನವರದಲ್ಲ. ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಳೊಂದಿಗೆ ಶುಕ್ರವಾರ ಡಿಕೆ ಶಿವಕುಮಾರ ಮಾತನಾಡಿದರು.
ಹಗಲಲ್ಲಿ ಸೋಂಕು ಬರಲ್ಲ, ರಾತ್ರಿ ವೇಳೆ ಸೋಂಕು ಬರುತ್ತದೆಯೇ? ಪರಿಜ್ಞಾನ ಇರುವವರು ಯಾರೂ ಇಂತಹ ನಿರ್ಧಾರಕ್ಕೆ ಬರುವುದಿಲ್ಲ ಎಂದರು.
ಇಡೀ ವರ್ಷ ಜನ ನರಳಿದ್ದಾರೆ. ಇವರು ಯಾರ ಅಭಿಪ್ರಾಯವನ್ನೂ ಪಡೆಯದೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ಯಾಕೆ? ಇವರಿಗೆ ಯಾರಾದರೂ ತಜ್ಞರು ರಾತ್ರಿ ವೇಳೆ ಕರ್ಫ್ಯೂ ಮಾಡಿದರೆ ಸೋಂಕು ಬರುವುದಿಲ್ಲ ಎಂದು ಸಲಹೆ ನೀಡಿದ್ದಾರಾ? ಆ ರೀತಿ ಯಾರಾದರೂ ಕೊಟ್ಟಿದ್ದರೆ ಅವರ ಫೆÇೀಟೋ ಇದ್ದರೆ ಕೊಡಿ. ಫೆÇೀಟೋನಾ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ ಎಂದು ಡಿಕೆಶಿ ವ್ಯಂಗ್ಯವಾಡಿದರು.
ಇದು ಸಾಮಾನ್ಯ ಜ್ಞಾನದ ವಿಚಾರ. ಇದರಲ್ಲಿ ಯಾವುದೇ ವಿಜ್ಞಾನ ಅಡಗಿಲ್ಲ. ರಸ್ತೆ, ಮಾರುಕಟ್ಟೆ ಸೇರಿದಂತೆ ಹಗಲೆಲ್ಲಾ ಜನ ಸಾವಿರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಎಲ್ಲೆಲ್ಲಿ ಯಾವ ರೀತಿ ನಿಯಂತ್ರಣ ಮಾಡಬೇಕೋ ಆ ರೀತಿ ಕ್ರಮ ಕೈಗೊಳ್ಳಬೇಕು ಎಂದರು.
ಈ ಸರ್ಕಾರ ಬಂದ ಮೇಲೆ ಎಷ್ಟು ನಿರ್ಧಾರಗಳಲ್ಲಿ ಯೂ ಟರ್ನ್ ಹೊಡೆದಿದೆ ಎಂದು ಲೆಕ್ಕ ಹಾಕಿಎಂದು ಮಾರ್ಮಿಕವಾಗಿ ನುಡಿದರು.
ರಾಜ್ಯದಿಂದ ಈ ಮಾಹಾಮಾರಿ ತೊಲಗಿ, ಜನರಿಗೆ ನೆಮ್ಮದಿ ಶಾಂತಿ ಸಿಗಲಿ ಎಂದು ನಾನು ವೈಕುಂಠ ಏಕಾದಶಿ ದಿನ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಮದು ಡಿಕೆ ಶಿವಕುಮಾರ್ ತಿಳಿಸಿದರು.
ರಾತ್ರಿ ಕರ್ಫ್ಯೂ ನಿರ್ಧಾರ ಸುಧಾಕರ್ ದು –ಡಿ.ಕೆ. ಶಿವಕುಮಾರ್

