ರಾಜ್ಯದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್ ಅಗತ್ಯವಿಲ್ಲ -ಸಚಿವ ಸುಧಾಕರ್

ಬೆಂಗಳೂರು: ಬ್ರಿಟನ್ ನಿಂದ ಬೆಂಗಳೂರಿಗೆ ಬಂದ 3 ಮಂದಿಯಲ್ಲಿ ಹೊಸ ಪ್ರಬೇಧದ ಕೊರೊನಾ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಕೊರೊನಾ ರೂಪಾಂತರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮತ್ತು ಸೀಲ್ ಡೌನ್ ಅಗತ್ಯವಿಲ್ಲ. ಹೊಸ ಕೊರೊನಾ ರೂಪಾಂತರದ ಪರಿಣಾಮ ಹೆಚ್ಚಿಲ್ಲ ಈಗಾಗಲೇ ಸರ್ಕಾರದಿಂದ ಅಗತ್ಯಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಹಾಗೆಯೇ ಶಾಲಾ ಕಾಲೇಜುಗಳ ಆರಂಭಕ್ಕೆಯಾವುದೇ ಅಡ್ಡಿ ಇಲ್ಲ. ನಿಗದಿಯಂತೆ ಜ. 1ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದೆ ಎಂದರುವ ಸಚಿವರು ಹೊಸ ಕೊರೊನಾ ರೂಪಾಂತರ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.