ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ; ಇದು ಸರ್ಕಾರದ ಧ್ಯೇಯ -ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂಬುದೇ ಸರ್ಕಾರದ ಧ್ಯೇಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಶುಕ್ರವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿ, ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ ಎಂದು ಮನವಿ ಮಾಡಿದ್ದಾರೆ.
ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪೆÇೀಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೆÇೀಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದವರು ಟ್ವೀಟ್ ಮಾಡಿದ್ದಾರೆ.