ಹುಬ್ಬಳ್ಳಿ: ಸಧ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಶನಿವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಖಾಲಿ ಇಲ್ಲದ ಹುದ್ದೆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾರೆ. ಇನ್ನು ಎರಡೂವರೆ ವರ್ಷ ಅವರೇ ಇರ್ತಾರೆ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರದ ಬಗ್ಗೆ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನೋಡೋಣ
ಅದರ ಬಗ್ಗೆ ಮುಖ್ಯಮಂತ್ರಿಗಳು, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆಂದರು.
ಸಿದ್ದರಾಮಯ್ಯ, ಡಿಕೆಶಿಯಿಂದ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂಬ ಹೇಳಿಕೆ ವಿಚಾರಬಗ್ಗೆ ಶೆಟ್ಟರ್ ಪ್ರತಿಕ್ರಿಯಿಸಿ, ಡಿಕೆಶಿ, ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾರೆ. ಕಾರಣ ಇರಲಿ, ಇಲ್ಲದಿರಲಿ ಅವರು ರಾಜೀನಾಮೆ ಕೇಳುತ್ತಾರೆ. ಅದು ಅವರ ಕೆಲಸ, ಹೀಗಾಗಿ ಬಾಯಿಂದ ರಾಜೀನಾಮೆ ಎಂಬ ಶಬ್ದವೇ ಬರುತ್ತದೆಂದು ಮಾರ್ಮಿಕವಾಗಿ ಹೇಳಿದರು.
ಸಧ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ -ಸಚಿವ ಜಗದೀಶ್ ಶೆಟ್ಟರ್

