ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುರುಗೇಶ್ ನಿರಾಣಿ ವಿರುದ್ಧ ಎಫ್ ಐಆರ್

ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
ನ್ಯಾಯಾಲಯದ ಆದೇಶದಂತೆ ನಿರಾಣಿ ವಿರುದ್ಧ ಕೊಡಿಗೆಹಳ್ಳಿ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಜುಲೈ ತಿಂಗಳಲ್ಲಿ ಸಮಾರಂಭವೊಂದರಲ್ಲಿ ಮುರುಗೇಶ್ ನಿರಾಣಿ ಹಿಂದೂ ದೇವತೆಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದರು.
ಈ ಕುರಿತು ಕಳೆದ ಜುಲೈನಲ್ಲಿ ನಿರಾಣಿ ವಿರುದ್ಧ ರಾಜ್ ಕುಮಾರ್ ಕಟುವ ಎಂಬವರು ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಡಿ. 26ರಂದು ನಿರಾಣಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪೆÇೀಲೀಸರಿಗೆ ಸೂಚಿಸಿತ್ತು.
ನ್ಯಾಯಾಲಯುದ ಆದೇಶದಂತೆ ಬೆಂಗಳೂರಿನ ಕೊಡಿಗೆಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153ಂ, 294ಂ, 295ರಡಿ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನಿರಾಣಿಯವರು ಭಾಷಣದ ನಡುವೆ, ಮಗಳನ್ನೇ ಮದುವೆಯಾದ ಬ್ರಹ್ಮ ನಮಗೆ ದೇವರು. 16 ಸಾವಿರ ಹೆಂಡಂದಿರನ್ನು ಮದುವೆಯಾದ ದನಾ ಕಾಯುವ ಕೃಷ್ಣ ನಮ್ಮ ದೇವರು. ಮುಗ್ಧ ಬಾಲಕಿಯರು ಸರೋವರದಲ್ಲಿ ಬೆತ್ತಲೆ ಸ್ನಾನ ಮಾಡುವಾಗ ಸೀರೆ ಕದ್ದ ತುಡುಗ ನಮ್ಮ ದೇವರು. ತಲೆ ಮೇಲೆ ಒಬ್ಬಳು ತೊಡೆಯ ಮೇಲೆ ಒಬ್ಬಳನ್ನು ಇಟ್ಟುಕೊಂಡಾತ ನಮಗೆ ದೇವರು ಎಂದು ಹಿಂದೂ ದೇವತೆಗಳ ಅವಮಾನ ಮಾಡಿದ್ದರು. ಶ್ರೀರಾಮನನ್ನೂ ಛೇಡಿಸಿ ಮಾತನಾಡಿದ್ದರು.