ಬೆಂಗಳೂರು: ಪರೀಕ್ಷೆಯ ಬಗ್ಗೆ ಆತಂಕಗೊಂಡಿದ್ದ ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಒಂದು ಮಹತ್ವದ ಸುದ್ದಿಯನ್ನು ನೀಡಿದೆ ರಾಜ್ಯ ಸರಕಾರ.
ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಜತೆಗೆ ಎಸ್‍ಎಸ್‍ಎಲ್ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದಲೇ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಸುರೇಶ್ ಕುಮಾರ್ ಅವರು ಪಿಯುಸಿ ಮತ್ತು ಎಸ್‍ಎಸ್‍ಎಲ್ಸಿ ಪರೀಕ್ಷೆಗಳ ದಿನಾಂಕದ ಬಗ್ಗೆ ಉಂಟಾಗಿದ್ದ ಗೊಂದಲ ಮತ್ತು ಅನುಮಾನಗಳೆಲ್ಲವನ್ನೂ ನಿವಾರಿಸಿದ್ದಾರೆ.
ಇದರೊಂದಿಗೆ ಪೆÇೀಷಕರು ಹಾಗೂ ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ.
ಶಿಕ್ಷಣ ಇಲಾಖೆಯು ಪಿಯುಸಿ ಮತ್ತು ಎಸ್‍ಎಸ್‍ಎಲ್ಸಿ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ.
ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಸುರೇಶ್ ಕುಮಾರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಜತೆಗೆ, ಈಗಾಗಲೇ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯವನ್ನು ಕಡಿತ ಮಾಡುವ ಪ್ರಸ್ತಾಪ ಶಿಕ್ಷಣ ಇಲಾಖೆಯ ಮುಂದೆ ಇಲ್ಲ. ಆದರೆ, ಶಾಲೆಯ ಮಟ್ಟದಲ್ಲಿಯೇ ಮೌಲ್ಯಮಾಪನ ನಡೆಸಲಾಗುವುದರಿಂದ ಆಯಾ ಮಕ್ಕಳ ಕಲಿಕೆಯ ಸಾಮರ್ಥ್ಯದ ಆಧಾರದಲ್ಲಿ ಸರಳವಾಗಿ ಮೌಲ್ಯಮಾಪನದ ಪ್ರಕ್ರಿಯೆ ಹಾಗೆಯೇ ಇರುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮೇನಲ್ಲಿ ಪಿಯು, ಜೂನ್ ನಲ್ಲಿ ಎಸ್‍ಎಸ್‍ಎಲ್ಸಿ ಪರೀಕ್ಷೆ -ಸಚಿವ ಸುರೇಶ್ ಕುಮಾರ್

