ಹುಬ್ಬಳ್ಳಿ: ನಗರಾಭಿವೃದ್ದಿ ಇಲಾಖೆ ವಿವಿಧ ವಿಭಾಗಗಳ ಅಧಿಕಾರಿಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಗರದ ಐಟಿ ಪಾರ್ಕ್‍ನ ಕೆಯುಡಿಎಫ್ ಸಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳನ್ನು ಸಚಿರು ತರಾಟೆಗೆ ತೆಗೆದುಕೊಂಡರು.
ಹು-ಧಾ ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ, ನಗರಾಭಿವೃದ್ಧಿ ಪ್ರಾಧಿಕಾರ, ಒಳ ಚರಂಡಿ ಮಂಡಳಿ ಹಾಗೂ ಕೆ.ಯು.ಐ.ಡಿ.ಎಫ್.ಸಿ ಕುರಿತು ಸಚಿವ ಬೈರತಿ ಪ್ರಗತಿ ಪರಿಶೀಲನೆ ನಡೆಸಿದರು.
ನಗರಾಭಿವೃದ್ದಿ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳನ್ನ ಈ ಸಂದರ್ಭದಲ್ಲಿ ಸಚಿವರು ತರಾಟೆಗೆ ತೆಗೆದುಕೊಂಡು, ನಗರಾಭಿವೃದ್ದಿ ಹಾಗೂ ವಿಳಂಬಗೊಳ್ಳುತ್ತಿರುವ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ವಿವಿಧ ಕಾಮಗಾರಿಗಳ ವಿಳಂಬದ ಬಗ್ಗೆ ಅಧಿಕಾರಿಗಳಿಗೆ ಸಚಿವರು ಖಡಕ್ ಸೂಚನೆ ನೀಡಿದರು.
ಶಾಸಕರಾದ ಶಂಕರಪಾಟೀಲ್ ಮುನೇನಕೊಪ್ಪ, ಅರವಿಂದ ಬೆಲ್ಲದ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಬೈರತಿ ಬಸವರಾಜ

