ದೇಶದ ಪ್ರತೀ ನಾಗರೀಕನಿಗೂ ಕೊರೊನಾ ಲಸಿಕೆ ಲಭ್ಯ -ಸಚಿವ ಡಾ.ಹರ್ಷವರ್ಧನ್

ಚೆನ್ನೈ: ದೇಶದ ಪ್ರತೀ ನಾಗರೀಕನಿಗೂ ಕೆಲವೇ ದಿನಗಳಲ್ಲಿ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ದೇಶದಾದ್ಯಂತ ಶುಕ್ರವಾರ 2ನೇ ಸುತ್ತಿನ ಲಸಿಕೆ ತಾಲೀಮು ಕಾರ್ಯಕ್ರಮ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಚಿವ ಹರ್ಷವರ್ಧನ್ ಅವರು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇನ್ನು ಕೆಲವೇ ದಿನಗಳಲ್ಲಿ ದೇಶದ ಪ್ರತೀ ನಾಗರೀಕರನಿಗೂ ಲಸಿಕೆ ವಿತರಣೆ ಮಾಡಲಾಗುತ್ತದೆ. ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಉತ್ತಮ ಕಾರ್ಯ ಸಾಧಿಸಿದೆ ಎಂದು ಅವರು ತಿಳಿಸಿದರು.