ಸಂಕ್ರಾಂತಿ ನಂತರ ಪದವಿ, ಸ್ನಾತಕೋತ್ತರ, ಡಿಪೆÇ್ಲಮೋ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿ -ಡಿಸಿಎಂ

ಬೆಂಗಳೂರು: ಪದವಿ, ಸ್ನಾತಕೋತ್ತರ, ಡಿಪೆÇ್ಲಮೋ ಮತ್ತು ಎಂಜಿನಿಯರಿಂಗ್ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸರಕಾರಿ- ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಡಿಸಿಎಂ ಈ ಮಾಹಿತಿ ನೀಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರಕಾರಕ್ಕೆ ಸಲಹೆ ನೀಡಿದರು.
ಹಾಗಾಗಿ ಅದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ. ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಮುಖ್ಯವಾಗಿ ಈ ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು.
ಹಾಗೆಯೇ, ಆನ್‍ಲೈನ್ ಪರೀಕ್ಷೆಗಳಿಗಿಂತ ಪೆನ್ ಮತ್ತು ಪೇಪರ್ ಆಧಾರಿತ ಆಫ್‍ಲೈನ್ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪೆÇ್ರ. ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.
ಯುಜಿಸಿ ನಿಯಮದಂತೆ ಮಾರ್ಚ್‍ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಇನ್ನು ಹಲವು ವಿವಿಗಳಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.
ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಇರುವ ಗೊಂದಲದ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈ ಆನ್‍ಲೈನ್ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪೆÇ್ರ. ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲಸಚಿವರು ಪಾಲ್ಗೊಂಡಿದ್ದರು.