ಬೆಂಗಳೂರು: ಕೊರೊನಾ ಹೆಸರಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ್ದು ಬಿಟ್ಟರೆ, ಈ ಸರ್ಕಾರ ಬೇರೆ ಏನೂ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದೂರಿದರು.
ಡಿಕೆಶಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇದನ್ನು ನಾವು ಜನರ ಗಮನಕ್ಕೆ ತರುತ್ತೇವೆ ಎಂದರು.
ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಬೆಂಗಳೂರು ನಗರದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರು ಚಲೋ ಪ್ರತಿಭಟನೆ ಮಾಡಿದ್ದೆವು. ಅದೇ ರೀತಿ ಪ್ರತಿ ಬ್ಲಾಕ್ ನಲ್ಲೂ ಜನರ ಸಮಸ್ಯೆ, ಕೊರೋನಾ ಸಂದರ್ಭದಲ್ಲಿ ಸರ್ಕಾರದ ವೈಫಲ್ಯ, ಜನರಿಗೆ ಸಹಾಯ ಮಾಡದೆ ಅವರ ಮೇಲೆಯೇ ತೆರಿಗೆ ಹೊರೆ ಹಾಕಿ ಹಿಂಸೆ ನೀಡುತ್ತಿದೆ ಎಂದರು.
ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಯಾರಿಗೂ ತಲುಪಿಲ್ಲ. ರಾಜ್ಯ ಸರ್ಕಾರದ ಪ್ಯಾಕೇಜ್ ಕೂಡ ವೃತ್ತಿಪರ ಕಾರ್ಮಿಕರಿಗೆ ತಲುಪಿಲ್ಲ. ವಯಸ್ಸಾದವರಿಗೆ ಪಿಂಚಣಿ ಇಲ್ಲ. ಗುತ್ತಿಗೆದಾರರಿಗೆ ಬಿಲ್ ಹಣ ನೀಡುತ್ತಿಲ್ಲ. ಇದೆಲ್ಲದರ ಮಧ್ಯೆ ಎಲ್ಲ ಶುಲ್ಕಗಳನ್ನು ಹೆಚ್ಚಿಸುತ್ತಿದೆ ಎಂದು ಡಿಕೆಶಿ ತಿಳಿಸಿದರು.
ಚೆಕ್ ನಿಂದ ಹಿಡಿದು, ಆರ್ ಟಿಜಿಎಸ್ ಮೂಲಕ ಲಂಚ ಪಡೆದಿರುವುದರವರೆಗೂ ಎಲ್ಲ ಭ್ರಷ್ಟಾಚಾರ ವಿಚಾರಗಳನ್ನು ಮುಂದಿಟ್ಟುಕೊಂಡು ಸರಕಾರದ ಜನವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.
ಅನೇಕ ಪೆÇಲೀಸ್ ಠಾಣೆ ಹಾಗೂ ಸರ್ಕಾರಿ ಕಚೇರಿಗಳನ್ನು ಬಿಜೆಪಿ ಕಛೇರಿಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲಾಗಿದೆ. ಪೆÇಲೀಸ್ ಅಧಿಕಾರಿಗಳು ನಮ್ಮ ಕಾರ್ಯಕರ್ತರನ್ನು ಕರೆದು ಬಿಜೆಪಿಗೆ ಹೋಗುವಂತೆ ಬೆದರಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ ಎಂದು ಡಿ. ಕೆ. ಶಿವಕುಮಾರ್ ಆರೋಪಿಸಿದರು.
ಪ್ರತಿ ಬೂತ್ ಮಟ್ಟದಲ್ಲಿ ಡಿಜಿಟಲ್ ಯೂತ್, ಪಂಚಾಯಿತಿ ಮಟ್ಟದಿಂದ ಮಹಿಳೆಯರನ್ನು ಸಂಘಟನೆ ಮಾಡಬೇಕಿದೆ. ಪಕ್ಷವನ್ನು ಮಾಸ್ ಬೇಸ್ ನಿಂದ ಕೇಡರ್ ಬೇಸ್ ಮಾಡಲು ಮುಖಂಡರಿಗೆ ಮಾರ್ಗದರ್ಶನ ನೀಡುತ್ತಿದ್ದೇವೆ ಎಂದರು.
ಕೊರೊನಾ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ ಬಿಟ್ಟರೆ, ಸರ್ಕಾರ ಬೇರೆ ಏನೂ ಮಾಡಿಲ್ಲ -ಡಿಕೆಶಿ

