ಬೆಂಗಳೂರು: ಯೂಥ್ ಕಾಂಗ್ರೆಸ್ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧೀಗಳೊಂದಿಗೆ ಡಿಕೆಶಿ ಮಾತನಾಡಿದರು.
ಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಲಿ. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ. ತಾವು ಈ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ತಾಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗೂ ನಾಯಕರು ಬೆಳೆಯಬೇಕು ಎಂಬುದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರ ಚಿಂತನೆ. ನಾವು ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿಲ್ಲಿಸಿದ್ದೇವೆ. ಹೀಗಾಗಿ ಯೂಥ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದೆ. ಪಾರದರ್ಶಕ ಹಾಗೂ ಮುಕ್ತವಾಗಿ ಚುನಾವಣೆ ನಡೆಯಬೇಕು. ಪಕ್ಷದ ಅಧ್ಯಕ್ಷನಾಗಿ ನಾನು ಯಾರ ಪರವಾಗಿ ನಿಲ್ಲುವುದಿಲ್ಲ. ಯಾರಿಗೂ ವಿರೋಧ ಮಾಡುವುದಿಲ್ಲ. ಯಾರಿಗೆ ಆಸಕ್ತಿ ಇದೆಯೋ, ಯಾರು ಪಕ್ಷಕ್ಕೆ ಸಮಯ ಕೊಟ್ಟು ಸಂಘಟನೆಗೆ ಶ್ರಮಿಸುತ್ತಾರೋ ಅಂತಹವರನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮತದಾರರಿಗೆ ಮನವಿ ಮಾಡುತ್ತೇನೆ ಎಂದರು.
ಯೂಥ್ ಕಾಂಗ್ರೆಸ್ ಚುನಾವಣೆಯಲ್ಲಿ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ

