ಮೈಸೂರು: ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಸುತುರಿನಲ್ಲಿ ಸೋಮವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಅದು ಪುನರ್ ರಚನೆಯೋ ಅಥವ ವಿಸ್ತರಣೆಯೋ ಅದು ಆವತ್ತಿಗೆ ಗೊತ್ತಾಗಲಿದೆ ಎಂದರು.
13ರ ಮಧ್ಯಾಹ್ನ ಅಮಾವಾಸ್ಯೆ ಕಳೆಯುತ್ತದೆ. ಆ ನಂತರ ಒಳ್ಳೆಯ ಸಮಯ ಅಂತ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸಮಯ ಕೇಳಿಕೊಂಡು ಸಂಪುಟ ವಿಸ್ತರಣೆ ಬಗ್ಗೆ ದಿನಾಂಕ ನಿದಿಗೊಳಿಸಲಾಗುವುದೆಂದರು
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ಮಾಡಬೇಕು ಎಂದು ಕೊಂಡಿದ್ದೇನೆ. ಹಣಕಾಸು ಪರಿಸ್ಥಿತಿ ತಕ್ಕಂತೆ ಸೂಕ್ತವಾದ ನಿರ್ಧಾರ ತೆಗೆದುಕೊಂಡು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು.
ಜ. 13 ಅಥವಾ 14ರಂದು ಸಂಪುಟ ವಿಸ್ತರಣೆ – ಸಿಎಂ ಬಿಎಸ್ ವೈ

