ಬುಧವಾರ ಸಂಪುಟ ವಿಸ್ತರಣೆ -ಸಿಎಂ ಬಿಎಸ್ ವೈ

ಬೆಂಗಳೂರು: ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಕೂಡಿ ಬಂದಿದೆ.
ಬುಧವಾರ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬುಧವಾರ ಸಚಿವ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಹೇಳಿದರು.
ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಯಡಿಯೂರಪ್ಪನವರು ತಿಳಿಸಿದರು.
ಖಾಲಿ ಇರುವ ಎಲ್ಲಾ 7 ಸ್ಥಾನಗಳನ್ನು ಭರ್ತಿ ಮಾಡಲಾಗುವುದೆಂದು ತಿಳಿಸಿದರು.