ಮೈಸೂರು: ಯಡಿಯೂರಪ್ಪನವರೇ ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡೋಲ್ಲ ಎಂದು ವಿದಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು.
ನಗರದಲ್ಲಿ ಬುಧವಾರ ವಿಶ್ವನಾಥ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕೊಟ್ಟ ಮಾತು ಉಳಿಕೊಳ್ಳದ ನಿಮ್ಮನ್ನು ಸಿದ್ಧಲಿಂಗೇಶ್ವರನು ಕ್ಷಮಿಸಲ್ಲ ಎಂದರು.
ಸಿಎಂ ಬಿಎಸ್ ವೈ ವಿರುದ್ಧ ಎಂಎಲ್ ಸಿ ಹೆಚ್. ವಿಶ್ವನಾಥ್ ಅಸಮಾಧಾನ ಹೊರ ಹಾಕಿದರು.
17 ಜನರ ಭಿಕ್ಷೆಯಲ್ಲಿ ಸರ್ಕಾರ ಇದೆ. ಅವರ ತ್ಯಾಗದಿಂದ ಸರ್ಕಾರ ಬಂದಿದೆ ಅದನ್ನು ನೆನಪು ಮಾಡಿಕೊಳ್ಳಿ ಎಂದು ವಿಶ್ವನಾಥ್ ಹೇಳಿದರು.
ನೀವು ಎಂತ ಸರ್ಕಾರ ಮಾಡಿದ್ದೀರಿ ಯಡಿಯೂರಪ್ಪನವರೇ 33ರಲ್ಲೂ 13 ವೀರಶೈವ, 11 ಜನ ಒಕ್ಕಲಿಗ, 4 ಜನ ಕುರುಬರಿಗೆ ಮಂತ್ರಿ ಕೊಟ್ಟಿದ್ದೀರಾ. ಇದೇನಾ ನಿಮ್ಮ ಸಾಮಾಜಿಕ ನ್ಯಾಯ ಎಂದು ವಿಶ್ವನಾಥ್ ಪ್ರಶ್ನಿಸಿದರು.
ನಾಗೇಶ್ ರನ್ನು ಯಾಕೇ ತೆಗೆಯಬೇಕು. ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಕೊಡ್ತೀರಾ ಹೇಳಿ ಎಂದ ಅವರು, ಆ ಸೈನಿಕನ ಮೇಲೆ 420 ಕೇಸ್ ಇದೆ ಎಂದರು.
ಯೋಗೇಶ್ವರ್ ದು ಬ್ಲಾಕ್ ಮೇಲ್ ತಂತ್ರ. ಅವರ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ ಎಂದು ವಿಶ್ವನಾಥ್ ಹೇಳಿದರು.
ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಎಲ್ಲದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಯಡ್ಯೂರಪ್ಪರೇ ಹೈಕಮಾಂಡ್ ಎಂದು ವಿಶ್ವನಾಥ್ ತಿಳಿಸಿದರು.
ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡ್ಯೂರಪ್ಪರ ಪ್ರತಿಷ್ಠೆ ಡೆಮಾಲೀಷ್ ಆಗೋಕು ವಿಜಯೇಂದ್ರರೇ ಕಾರಣ ಎಂದು ವಿಶ್ವನಾಥ್ ದೂರಿದರು.
ಯಡಿಯೂರಪ್ಪನವರೇ ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡೋಲ್ಲ -ಹೆಚ್. ವಿಶ್ವನಾಥ್

