ಬೆಂಗಳೂರು: ನೂತನವಾಗಿ 7 ಮಂದಿ ಶಾಸಕರು ಸಚಿವರಾಗಿ ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರಾಗಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್. ಶಂಕರ್, ಎಸ್. ಅಂಗಾರ ಮತ್ತು ಸಿಪಿ ಯೋಗೇಶ್ವರ್ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

