ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ -ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ. ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ ಎಂದರು.
ಸಿಡಿ ಬ್ಲಾಕ್ ಮೇಲ್ ಬಗ್ಗೆ ಮುಖ್ಯಮಂತ್ರಿ ಕ್ರಿಮಿನಲ್ ಕೇಸ್ ದಾಖಲು ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಆ ಪಕ್ಷದವರೆ ಆರೋಪ ಮಾಡಿರೋದು, ನಾವೇನು ಆರೋಪ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಅವರ ಪಕ್ಷದವರೆ ಆರೋಪ ಮಾಡ್ತಿದ್ದಾರೆ ಅಂದರೆ ಅದರಲ್ಲಿ ಸತ್ಯ ಇದೆ ಅಲ್ವಾ? ಎಂದರು.
ಸಿಎಂ ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ. ಅದಕ್ಕೆ ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳುತ್ತಿದ್ದೇನೆ ಎಂದರು.
ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಪಕ್ಷೇತರ ಶಾಸಕ ನಾಗೇಶ್ ರನ್ನ ಕೈಬಿಟ್ಟಿದ್ದಾರೆ. ಅವರನ್ನು ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಹೇಳಿಲ್ಲ ಎಂದರು.
ಈಗ ಮುನಿರತ್ನರಿಗೆ ಸಚಿವ ಸ್ಥಾನ ನೀಡಿಲ್ಲ. ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ ಕರೆದುಕೊಂಡರು ಅವನನ್ನು ಎಂದ ಸಿದ್ದರಾಮಯ್ಯ ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು ವ್ಯಂಗ್ಯವಾಡಿದರು.