ನಟಿ ರಾಗಿಣಿಗೆ ಜಾಮೀನು ಮಂಜೂರು

ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿತ್ತು. ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟು ಜಾಮೀನು ಮಂಜೂರು ಮಾಡಿದೆ.
ಕಳೆದ 140 ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿಯನ್ನು 2020ರ ಸೆ. 4ರಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ನಂತರ ಆಕೆಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.