ಶಿವಮೊಗ್ಗದಲ್ಲಿ ಸ್ಫೋಟ: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬಿಎಸ್ ವೈ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ದುರಂತದಲ್ಲಿ 5 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ನಾನು ಘಟನಾ ಸ್ಥಳಕ್ಕೆ ನಾಳೆ ಭೇಟಿ ನೀಡಲಿದ್ದೇನೆ. ಸುತ್ತಮುತ್ತಲಿನ ಗ್ರಾಮಸ್ಥರ ಜೊತೆಗೆ ಚರ್ಚಿಸಲಿದ್ದೇನೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದರು ಸಿಎಂ.
ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇಂಥ ಘಟನೆ ಮರುಕಳಿದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.