ಅಕ್ರಮ ಗಣಿಗಾರಿಕೆ ನಡೆಸುತ್ತಿರುವರು ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಿ -ಸಿಎಂ ಬಿಎಸ್ ವೈ

ಮೈಸೂರು: ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿ ಅದನ್ನು ಸಕ್ರಮ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಬಿಎಸ್. ವೈ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಅರ್ಜಿ ಹಾಕಿ ಗಣಿಗಾರಿಕೆ ಸಕ್ರಮ ಮಾಡಿಕೊಳ್ಳಲಿಲ್ಲ ಅಂದರೆ ಸ್ಥಳ ತನಿಖೆ ಮಾಡಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಬಿಎಸ್ ವೈ ಎಚ್ಚರಿಸಿದರು.
ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯವಾಗಿದೆ ಎಂದು ಸಿಎಂ ತಿಳಿಸಿದರು.
ಶಿವಮೊಗ್ಗದಲ್ಲಿ ನಡೆದ ಗಣಿ ಸ್ಪೋಟದ ದುರ್ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ. ಘಟನೆಯಿಂದ ಮನೆ ಜಖಂ ಆಗಿರುವುದನ್ನು ಪರಿಶೀಲಿಸಿ ಅದಕ್ಕೂ ಪರಿಹಾರ ಕೊಡುತ್ತೇವೆ ಎಂದು ಯಡಿಯೂರಪ್ಪನವರು ಹೇಳಿದರು.