ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ನಟರಾಜನ್ ಅವರನ್ನು ಬುಧವಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.
ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದ ಆರೋಪದಡಿ ಶಶಿಕಲಾ ಅವರನ್ನು ಬಂಧಿಸಲಾಗಿತ್ತು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ 4 ವರ್ಷಗಳ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿರುವ ಶಶಿಕಲಾ ಅವರನ್ನು ಬಿಡುಗಡೆ ಮಾಡಲಾಗಿದೆ.
2017ರಲ್ಲಿ ಈ ಪ್ರಕರಣದಲ್ಲಿ ಶಶಿಕಲಾ ಸೇರಿ ಮತ್ತಿಬ್ಬರಿಗೆ 10 ಕೋಟಿ ರೂ. ದಂಡ, 4 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ನ್ಯಾಯಾಲಯ ವಿಧಿಸಿದ್ದ 10 ಕೋಟಿ ರೂ. ದಂಡವನ್ನು ಶಶಿಕಲಾ ಪಾವತಿಸಿದ್ದಾರೆ.
ಶಶಿಕಲಾ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

