ಬೆಂಗಳೂರು: ಜನವರಿ 31ರಂದು ಪೆÇೀಲಿಯೊ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪೆÇೀಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 17ರಂದು ಪೆÇೀಲಿಯೋ ಲಸಿಕೆ ನೀಡಬೇಕಿತ್ತು. ಕೊರೊನಾ ಲಸಿಕೆ ಬಂದಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೇ ತಿಂಗಳು 31ರಂದು 0-5 ವರ್ಷದ 64,07,930 ಮಕ್ಕಳಿಗೆ ಪೆÇೀಲಿಯೊ ಲಸಿಕೆ ನೀಡಲಾಗುವುದು ಎಂದರು.
ಲಸಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಚಾಲನೆ ದೊರೆಯಲಿದೆ. ಪೆÇೀಷಕರು ಹಿಂದೆ ಲಸಿಕೆ ಹಾಕಿಸಿದ್ದರೂ ಮತ್ತೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕಳೆದ 10-11 ವರ್ಷಗಳಿಂದ ಪೆÇಲೀಯೋ ಸೋಂಕು ಕಂಡುಬಂದಿಲ್ಲ. ಭಾರತದಲ್ಲಿ ಈ ರೋಗ ನಿಮೂರ್ಲನೆಯಾಗಿದೆ. ಆದರೆ ಪಕ್ಕದ ಪಾಕಿಸ್ತಾನ, ಅಫ್ಘನಿಸ್ತಾನದಲ್ಲಿ ಈ ರೋಗ ಇರುವುದರಿಂದ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕಿದೆ ಎಂದರು.
ನಮ್ಮಲ್ಲಿ ಒಟ್ಟು 85,05,060 ಡೋಸ್ ಪೆÇೀಲಿಯೊ ಲಸಿಕೆ ಲಭ್ಯವಿದೆ. 1,10,179 ವ್ಯಾಕ್ಸಿನೇಟರ್ ಗಳು ಇದ್ದಾರೆ. 6,645 ಸೂಪರ್ ವೈಸರ್ ತಂಡ, 904 ಮೊಬೈಲ್ ತಂಡ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32,908 ಬೂತ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ 2,90,533 ಮಂದಿಗೆ ಕೋವಿಡ್ ಲಸಿಕೆ ನೀಡಿದ್ದು, ಇವತ್ತಿನವರೆಗೆ ಶೇ. 49ರಷ್ಟು ಸಾಧನೆಯಾಗಿದೆ. ಲಸಿಕೆ ಪಡೆದಿರುವುದರಿಂದ ಯಾವುದೇ ಸಾವು ಆಗಿಲ್ಲ. ಈ ಬಗ್ಗೆ ತಪ್ಪು ತಿಳಿವಳಿಕೆ ಬೇಡ. ಕೆಲವೆಡೆ ಅಡ್ಡ ಪರಿಣಾಮವಾಗಿದ್ದು, ಅದು ಕೂಡ ನಂತರ ಪರಿಹಾರವಾಗಿದೆ. ಇಂತಹ ಲಸಿಕೆಯ ರಾಮಬಾಣವನ್ನು ಬಳಸದಿದ್ದರೆ ವ್ಯರ್ಥವಾಗುತ್ತದೆ ಎಂದರು.
ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕ್ರಮ ವಹಿಸಿದೆ ಎಂದರು.
ಮಕ್ಕಳಿಗೆ ಕಡ್ಡಾಯವಾಗಿ ಪೆÇೀಲಿಯೊ ಲಸಿಕೆ ಹಾಕಿಸಿ -ಸಚಿವ ಡಾ.ಕೆ.ಸುಧಾಕರ್

