ನವದೆಹಲಿ: ದೆಹಲಿಯಲ್ಲಿನ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಶುಕ್ರವಾರ ಸಂಜೆ ಬಾಂಬ್ ಸ್ಫೋಟ ಸಂಭವಿಸಿದೆ.
ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸಂಜೆ ಸುಮಾರು 5 ವೇಳೆಗೆ ಸ್ಫೋಟ ಸಂಭವಿಸಿದೆ.
ಈ ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ವಾಹನಗಳು ಈ ಸ್ಫೋಟದಲ್ಲಿ ಹಾನಿಗೊಳಗಾಗಿದೆ.
ದೆಹಲಿ ಪೆÇಲೀಸರ ವಿಶೇಷ ತಂಡ ತನಿಖೆ ಕೈಗೊಂಡಿದ್ದಾರೆ.
ಸುಧಾರಿತ ಸ್ಫೋಟಕ ಬಳಸಿ ಈ ಬಾಂಬ್ ಸಿಡಿಸಲಾಗಿದ್ದು, ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಿಸಿದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

