ದೇಶದ ಬೆಳವಣಿಗೆಗೆ ನೆರವಾಗುವ ಬಜೆಟ್ -ಸಿಎಂ ಬಿಎಸ್ ವೈ

ಬೆಂಗಳೂರು: ದೇಶದ ಬೆಳವಣಿಗೆಗೆ ನೆರವಾಗುವ ಬಜೆಟ್ ಇದಾಗಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಂಡಿಸಿರುವ ಬಜೆಟ್ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯAತಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಕೋವಿಡ್ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್ ಉತ್ತಮವಾಗಿದೆ ಎಂದಿದ್ದಾರೆ ಸಿಎಂ ಬಿಎಸ್ ವೈ.
ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲ ಸೌಕರ್ಯಾಭಿವೃದ್ಧಿ, ಕೈಗಾರಿಕಾ ಬೆಳವಣಿಗೆಗೆ ಬಜೆಟ್ ನಲ್ಲಿ ವಿಶೇಷಗಮನ ನೀಡಲಾಗಿರುವುದು ಸ್ವಾಗತಾರ್ಹ ಎಂದಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ.