ಮದ್ದೂರು: ಮಹಿಳೆ ಮೇಲೆ ಮನೆಯಲ್ಲಿ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ.
ಈ ದುರ್ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಸರ್ ಎಂ. ವಿಶ್ವೇಶ್ವರಯ್ಯ ನಗರದಲ್ಲಿ ನಡೆದಿದೆ.
ಪಟ್ಟಣದ ವಿವಿ ನಗರದ ಬಿಳಿಯಪ್ಪ ಅವರ ಪತ್ನಿ ಪೂರ್ಣಿಮಾ (39) ಕೊಲೆಯಾದ ದುರ್ದೈವಿ ಆಗಿದ್ದಾರೆ.
ಪೂರ್ಣಿಮಾರ ಮೇಲೆ ಅತ್ಯಾಚಾರ ನಡೆಸಿ ಅವರ ಕೈ ಕಾಲು ಕಟ್ಟಿ ಉಸಿರು ಕಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪೂರ್ಣಿಮಾರ ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಎಸ್ಪಿ, ಬೆರಳಚ್ಚು ಮತ್ತು ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

