ಏರೋ ಇಂಡಿಯಾ-2021ಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಂದ ಚಾಲನೆ

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ-2021ಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಚಾಲನೆ ನೀಡಿದರು.
ವೈಮಾನಿಕ ಪ್ರದರ್ಶನದಲ್ಲಿ ಈ ಬಾರಿ ಒಟ್ಟು 63 ವಿಮಾನಗಳಿಂದ ಪ್ರದರ್ಶನ ನಡೆಯಲಿದೆ. ದಿನಕ್ಕೆ ಎರಡು ಬಾರಿ 42 ವಿಮಾನಗಳು ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ.
ಡಕೋಟಾ, ಸುಖೋಯ್, ರಫೇಲ್, ಎಲ್ ಸಿಹೆಚ್, ಎಲ್ ಯುಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್, ಹೆಲಿಕಾಫ್ಟರ್ ಗಳಿಂದ ಪ್ರದರ್ಶನ ನಡೆಯಲಿದೆ.
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಕೋವಿಡ್ ನೆಗೆಟಿವ್ ರಿಪೆÇೀರ್ಟ್ ಕಡ್ಡಾಯಗೊಳಿಸಲಾಗಿದೆ.
ಈ ಸಾರಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಬ್ಯುಸಿನೆಸ್ ವಿಸಿಟರ್ ಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.
ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಉಪಸ್ಥಿತರಿದ್ದರು.