ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ಕಾರ ಮುಂದೂಡಿದೆ.
ಇದೇ ಫೆ. 26ರಿಂದ 28ರವರೆಗೆ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊರೊನಾ ನಿಯಮಗಳ ಸೂಕ್ತ ಪಾಲನೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ಮಾಹಿತಿ ನೀಡಿ, ಕೊವಿಡ್ -19ಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳು ರೂಪುಗೊಳ್ಳುವ ಸಾಧ್ಯತೆ ಇದೆ. ಸಮ್ಮೇಳನದಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ಸೇರುವುದರಿಂದ ಮಾರ್ಗಸೂಚಿಗಳ ಪಾಲನೆ ಕಷ್ಟವಾಗುತ್ತದೆ. ಅಷ್ಟಕ್ಕೂ, ಸಮ್ಮೇಳನದ ಸಿದ್ಧತೆಗಳು ಇನ್ನೂ ಆರಂಭವಾಗಿಲ್ಲ. ಆದ್ದರಿಂದ, ಸಮ್ಮೇಳನವನ್ನೇ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸಂಬಂಧಿಸಿದ ನಿಯಮಗಳು ರೂಪುಗೊಂಡ ನಂತರ ಮಾ. 9ರಂದು ಮತ್ತೆ ಸಭೆ ನಡೆಸಿ, ಕೊವಿಡ್ -19 ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಸೂಕ್ತ ತಯಾರಿ ಮಾಡಿಕೊಂಡು ಸಮ್ಮೇಳನ ನಡೆಸುವ ದಿನಾಂಕ ತಿಳಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.