ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ -ಸದಾನಂದಗೌಡ

ಮೈಸೂರು: ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.
ನಗರದಲ್ಲಿ ಶನಿವಾರ ಸದಾನಂದ ಗೌಡರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಎಂದರೆ ಕೊಡಲಿ ಬಿಡಿ. ಸುಮ್ಮನೆ ಯಾಕೇ ಹಠ ಮಾಡ್ತೀರಾ? ಎಂದು ಸದಾನಂದ ಗೌಡರು ಪ್ರಶ್ನಿಸಿದ್ದರು.
ರೈತರಿಗೆ ಬೆಂಬಲ ನೀಡಿದ್ದು, ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರೋದು ಬೇಡ. ರೈತರು ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ ಎಂದರು.
ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು ಎಂದು ಸದಾನಂದ ಗೌಡರು ಹೇಳಿದರು.
ಪಟ್ಟಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ಕೃಪಾಪೆÇೀಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜಿ ಆಗಿದ್ದೀವಿ. ಮಾತುಕತೆಗೂ ಸಿದ್ಧರಿದ್ದೀವಿ, ಆದರೆ, ರೈತರೆ ಹಠ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಪಾಪ್ ಸಿಂಗರ್ ರಿಹಾನ ಏನು ರೈತರ ಕಷ್ಟದ ಬಗ್ಗೆ ಮಾತನಾಡೋದು ಎಂದು ಸದಾನಂದ ಗೌಡ ಅವರು ಪ್ರಶ್ನಿಸಿದರು.
ರಿಹಾನಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆ. ರಿಹಾನಗೆ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ರಿಹಾನ ವಿರುದ್ಧ ಹರಿಹಾಯ್ದರು.
ರಿಹಾನ ಭತ್ತದ ಗದ್ದೆ ಮುಂದೆ ನಿಂತು ಫೆÇೀಟೋ ತೆಗೆಸಿಕೊಂಡು ಹೋಗಿರಬಹುದು. ರೈತರು ಕೃಷಿ ಉತ್ಪನ್ನಗಳನ್ನು ಹೇಗೆ ಮಾರಾಟ ಮಾಡ್ತಾರೆ ಅಂತ ರಿಹಾನೆಗೆ ಗೊತ್ತಾ ? ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆಂದು ಟೀಕಿಸಿದರು.