ಡೆಹರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿರುವ ಹಿಮಸ್ಫೋಟಕ್ಕೆ ನಂದಾದೇವಿ ಪರ್ವತದ ಒಂದು ಭಾಗ ಕುಸಿದು ಭೀಕರ ಪ್ರವಾಹ ಸೃಷ್ಟಿಯಾಗಿದೆ.
ಚಮೋಲಿ ಜಿಲ್ಲೆಯ ಜೋಷಿಮಠ್‍ನಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿ ಧೌಲಿ ಗಂಗಾ ನದಿ ಉಕ್ಕೇರಿ ಹರಿಯುತ್ತಿದೆ.
ಕಿನಿ ಗ್ರಾಮದ ಬಳಿ ನಡೆಯುತ್ತಿದ್ದ ರಿಷಿ ಗಂಗಾ ಪವರ್ ಪ್ರಾಜೆಕ್ಟ್‍ಗೆ ಸಂಪೂರ್ಣ ಧಕ್ಕೆ ಉಂಟಾಗಿದೆ.
ಇಲ್ಲಿ ಕೆಲಸ ಮಾಡುತ್ತಿದ್ದ 150ಕ್ಕೂ ಹೆಚ್ಚು ಕಾರ್ಮಿಕರು ಕಾಣೆ ಆಗಿದ್ದಾರೆ.
ಈವರೆಗೆ 10 ಮಂದಿ ಮೃತ ದೇಹಗಳು ಪತ್ತೆಯಾಗಿವೆ.
ಚಮೇಲಿ ಜಿಲ್ಲೆಯ ತಪೆÇೀವನ ಪ್ರದೇಶದಲ್ಲಿರುವ ಸುರಂಗದಲ್ಲಿ ಸಿಲುಕಿದ್ದ 17 ಕಾರ್ಮಿಕರನ್ನು ಇಂಡೋ-ಟಿಬೆಟಿಯನ್ ಪೆÇಲೀಸರು ರಕ್ಷಿಸಿದ್ದಾರೆ.
ಇನ್ನೂ ಹೆಚ್ಚಿನ ಸಾವು ನೋವುಗಳು ಸಂಭವಿಸಿದೆ.
ಪ್ರವಾಹ ಸಂತ್ರಸ್ಥರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಯಾರೇ ಪ್ರವಾಹದಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದರೆ ವಿಪತ್ತು ನಿರ್ವಹಣಾ ಕೇಂದ್ರದ ಸಂಖ್ಯೆ 1070 ಅಥವಾ 9557444486ಕ್ಕೆ ಕರೆ ಮಾಡಿ ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ತಿಳಿಸಿದ್ದಾರೆ.
ಜಲಪ್ರಳಯದಿಂದ ಮೃತರಾದ ಪ್ರತಿ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋóಣೆ ಮಾಡಿದ್ದಾರೆ.
ಚಮೋಲಿ ಜಿಲ್ಲೆಯ ಜೊತೆ ಪೌರಿ, ತೆಹ್ರಿ, ರುದ್ರಪ್ರಯಾಗ್, ಹರಿದ್ವಾರ್, ಡೆಹ್ರಾಡೂನ್ ಮೊದಲಾದ ಜಿಲ್ಲೆಗಳಿಗೂ ಪ್ರವಾಹ ಭೀತಿ ಎದುರಾಗಿದೆ.
ಇಂಡೋ ಟಿಬೆಟಿಯನ್ ಗಡಿ ಪೆÇಲೀಸ್ ಪಡೆ ಹಾಗೂ ಎನ್‍ಡಿಆರ್‍ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.
ಗಂಗಾ ನದಿ ಪಾತ್ರದ ಎಲ್ಲಾ ಪ್ರದೇಶಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.

