ಬೆಂಗಳೂರು: ವಿಧಾನಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಆದರೆ ಕೊನೆ ಗಳಿಗೆಯಲ್ಲಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆ

