ಹರಿಹರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ಹರಿಹರದ ರಾಜನಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಕುರಿತು ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆ. ಗೋಹತ್ಯೆ ನಿμÉೀಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದರು.
ಈ ಕಾಯ್ದೆಗೆ ನಮ್ಮ ವಿರೋಧವಿದೆ ಎಂದ ಡಿಕೆಶಿ ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮಾತನಾಡಲೂ ಅವಕಾಶ ನೀಡಲಿಲ್ಲ.
ಅಧಿಕಾರದ ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಸರ್ಕಾರವಿದೆ ಎಂಬ ಕಾರಣಕ್ಕೆ ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆಂದರು.
ಬೆಳಗಾವಿ ಲೋಕಸಭೆ ಉಪಚುನಾವಣೆ ಕುರಿತು ಕೇಲಲಾದ ಪ್ರಶ್ನೆಗೆ ಡಿಕೆಶಿ ಉತ್ತರಿಸಿ, ಉಪಚುನಾವಣೆ ಹಿನ್ನೆಲೆ ಮೂರು ಜನರ ಹೆಸರು ವರಿಷ್ಠರಿಗೆ ಶಿಫಾರಸ್ಸು ಮಾಡಿದ್ದೇವೆ. ಯಾರ ಹೆಸರನ್ನೂ ಅತಿ ಹೆಚ್ಚಾಗಿ ಕಾರ್ಯಕರ್ತರು ಹೇಳುತ್ತಾರೋ ಅವರಿಗೆ ಟಿಕೆಟ್ ಸಿಗಲಿದೆ. ನಾವು ಯಾರೊಬ್ಬರ ಪರವಾಗಿ ಇಲ್ಲ ಎಂದರು.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ -ಡಿಕೆಶಿ

