Who is ಈಶ್ವರಪ್ಪ ? -ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಹುಬ್ಬಳ್ಳಿ: Who is ಈಶ್ವರಪ್ಪ ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ನಗರದಲ್ಲಿ ಗುರುವಾರ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಎನೂ ಸಾಧನೆ ಮಾಡಿಲ್ಲ ಅಂತ ಸಚಿವ ಈಶ್ವರಪ್ಪ ಹೇಳಿದ್ದಾರಲ್ಲ ಎಂಬ ವಿಚಾರಕ್ಕೆ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ನಾನು ಸಿಎಂ ಆಗಿದ್ದಾಗ ಎನು ಅಭಿವೃದ್ಧಿ ಮಾಡಿದ್ದೇನೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. Who is ಈಶ್ವರಪ್ಪ ? ಎಂದರು.
ನನಗೆ ಈಶ್ವರಪ್ಪನ ಸರ್ಟಿಫಿಕೇಟ್ ಬೇಕಾಗಿಲ್ಲ. ಐ ಡೋಂಟ್ ಕೇರ್ ಈಶ್ವರಪ್ಪ. ನನ್ನ ಸಾಧನೆ ಬಗ್ಗೆ ಈಶ್ವರಪ್ಪಗೆ ವರದಿ ಕೊಡುವ ಅವಶ್ಯಕತೆ ಇಲ್ಲ. ರಾಜ್ಯದ ಜನ ನನಗೆ ಸರ್ಟಿಫಿಕೆಟ್ ಕೊಡಬೇಕು ಎಂದು ಹೇಳಿದರು.
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲ್ಲ ಎಂಬ ವಿಚಾರದ ಬಗ್ಗೆ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಹಾಗಾಗಿ ಜೆಡಿಎಸ್ ಸ್ಪರ್ಧಿಸಲ್ಲ ಎಂದು ಟಾಂಗ್ ನೀಡಿದರು.
ಜೆಡಿಎಸ್ ನವರು ಬಿಜೆಪಿಗೆ ಸಹಾಯ ಮಾಡಲು ಹೊರಟಿದ್ದಾರೆ ಎಂದು ಅವರು ದೂರಿದರು.
ಚುನಾವಣೆ ಘೋಷಣೆಯಾದ ಕೂಡಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಕಾಂಗ್ರೆಸ್ ನಲ್ಲಿ ಕಾರ್ಯಕರ್ತರಿಗೆ ಕೊರೆತೆಯಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ಹಿಂದುಳಿದವರ ಪರವಾಗಿದೆ. ಹೋರಾಟದ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು.
ಕುರುಬರಿಗೆ ಎಸ್ ಟಿ ಮೀಸಲು ನೀಡುವ ಕುರಿತು, ಕುಲಶಾಸ್ತ ಅಧ್ಯಯನದ ವರದಿ ಬಂದಿಲ್ಲ. ವರದಿ ಬರುವ ಮುನ್ನವೇ ಹೋರಾಟ ಬೇಡ ಅಂದಿದ್ದೆ ಎಂದರು.
ನಾನು ಸಿಎಂ ಆಗಿದ್ದ ವೇಳೆ ನಾಲ್ಕು ಜಿಲ್ಲೆಗಳಲ್ಲಿ ಕುರುಬರನ್ನ ಎಸ್ ಟಿಗೆ ಸೇರಿಸಬೇಕು ಅಂತಾ ಆದೇಶ ಮಾಡಿದ್ದೆ. ಎಸ್ ಟಿ ಮೀಸಲು ಹೋರಾಟದಲ್ಲಿ ರಾಜಕೀಯ ಮಾಡಲ್ಲ ಎಂದವರು ಹೇಳಿದರು.
ಇದು ಆರ್.ಎಸ್.ಎಸ್. ಪ್ರೇರಿತ ಹೋರಾಟ. ಈಶ್ವರಪ್ಪರನ್ನು ಆರ್.ಎಸ್.ಎಸ್.ನವರು ಎತ್ತಿ ಕಟ್ಟಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.