ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ -ಹೆಚ್. ವಿಶ್ವನಾಥ್

ಮೈಸೂರು: ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಎಂದು ಎಂ.ಎಲ್.ಸಿ ಹೆಚ್. ವಿಶ್ವನಾಥ್ ಹೇಳಿದರು.
ನಗರದಲ್ಲಿ ಶುಕ್ರವಾರ ವಿಶ್ವನಾಥ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಟ್ರಂಪ್ ಇದ್ದಂತೆ. ಇದು ಟ್ರಂಪಾಯಣದಂತೆ ಸಿದ್ದರಾಮಯಾಣ ನಡೆಯುತ್ತಿದೆ
ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ದರಿಲ್ಲ ಎಂದು ವಿಶ್ವನಾಥ್ ಮಾರ್ಮಿಕವಾಗಿ ಹೇಳಿದರು.
ಸಿದ್ದು ಕಾಂಗ್ರೆಸ್ ಸಂಸ್ಕಾರ ಸಂಸ್ಕøತಿ ಇಲ್ಲದ ಮನುಷ್ಯ. ನಾವು ಅವರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದಕ್ಕೆ ಸಿಎಂ ಆದವರು. ಅದೃಷ್ಟದಿಂದ ಸಿಎಂ ಆದವರು ಎಂದರು.
ಸಿದ್ದರಾಮಯ್ಯ ಅವರಿಗೆ ಸ್ವಾರ್ಥ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ವಿಶ್ವನಾಥ್ ದೂರಿದರು.
ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪನವರನ್ನು ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹಾಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರೆಂದು ಟೀಕಿಸಿದರು.
ಸಿದ್ದರಾಮಯ್ಯರಿಂದ ರಾಜ್ಯದಲ್ಲಿ ಅಹಿಂದ ಹೋರಾಟ ವಿಚಾರವಾಗಿ ವಿಶ್ವನಾಥ್ ಪ್ರತಿಕ್ರಿಯಿಸಿ, ಇದು ಯಾವ ಅಹಿಂದ ಹೋರಾಟವೂ ಅಲ್ಲ. ಇದು ಸಿದ್ದರಾಮಯ್ಯ ಹಾಗೂ ಮಹದವೇಪ್ಪ ಅವರ ಸ್ವಾರ್ಥದ ಹೋರಾಟ ಎಂದು ಟೀಕೆ ಮಾಡಿದರು.
ಸ್ವಾರ್ಥಕ್ಕಾಗಿ ಸಿದ್ದರಾಮಯ್ಯ ಹಿಂದ ಅಹಿಂದ ಎಂದು ಚಡಪಡಿಸುತ್ತಿದ್ದಾರೆ. ಅವರಿಗೆ ಅಸ್ತಿತ್ವ ಅಭದ್ರತೆ ಕಾಡುತ್ತಿದೆ ಹಾಗಾಗಿ ಈಗ ಅಹಿಂದೆ ಹಿಂದೆ ಹೊರಟಿದ್ದಾರೆಂದರು.
ಕುರುಬ ಸಮಾಜದ ಎಸ್ ಟಿ ಹೋರಾಟ ಅವರಿಲ್ಲದೆ ಯಶಸ್ವಿಯಾಗಿದೆ. ಲಕ್ಷಾಂತರ ಜನರು ಸೇರಿಸಿ ಯಶಸ್ಸು ಕಂಡಿದ್ದೇವೆ
ನಾನು ಇಲ್ಲದಿದ್ದರೆ ಆಗಲ್ಲ ಎಂದುಕೊಂಡಿದ್ದರು. ಅವರಲ್ಲಿ ನಾನು ನಾನು ಅನ್ನೋ ಸ್ವಾರ್ಥ ಇತ್ತು. ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ. ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ ಎಂದು ವಿಶ್ವನಾಥ್ ಹೇಳಿದರು.
ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ಬಿಟ್ಟು ಹಿಂದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೆ ಅಲ್ಪಸಂಖ್ಯಾತರನ್ನು ತುಳಿದು ಹಾಕಿದ್ದಾರೆ. ಮುಸ್ಲಿಂರನ್ನು ಸಾಕಷ್ಟು ಬಾರಿ ಸೋಲಿಸಲು ಕಾರಣರಾಗಿದ್ದಾರೆಂದು ವಿಶ್ವನಾಥ್ ಸಿದ್ದು ವಿರುದ್ಧ ಹರಿಹಾಯ್ದರು.
ಸಿದ್ದರಾಮಯ್ಯನವರಿಗೆ ಸಮುದಾಯ ನನ್ನ ಜೊತೆ ಇಲ್ಲ ಅನ್ನೋದು ಈಗ ಅವರಿಗೆ ಕಾಣುತ್ತಿದೆ. ಒಂದೆಡೆ ಡಿಕೆ ಶಿವಕುಮಾರ್ ನಾಯಕತ್ವ ಪ್ರಬಲವಾಗುತ್ತಿದೆ. ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದು ಏಕಾಂಗಿಯಾಗುತ್ತಿದ್ದಾರೆಂದರು.
ಇದೀಗ ಅವರಿಗೆ ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ ಎಂದು ವಿಶ್ವನಾಥ್ ಹೇಳಿದರು.
ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ ಎಂದರು.