ಬೆಂಗಳೂರು: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ. ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಏಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈಗಿನ ಮೀಸಲಾತಿ ಬದಲಾವಣೆ ಹೆಚ್ಚಳದ ಬೇಡಿಕೆಗೆ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ. 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ ಎಂದಿದ್ದಾರೆ.
ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕು ತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ? ಮಂಡಲ್ ವರದಿಯನ್ನು ವಿರೋಸಿ ಮೈಗೆ ಬೆಂಕಿ ಹಚ್ಚಿಕೊಂಡವರು ಯಾರು ? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಸಿ ಬೀದಿಗಿಳಿದವರು ಯಾರು ? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ರಾಮಾಜೋಯಿಸ್ ಅವರು ಯಾವ ಪಕ್ಷದವರು ಉತ್ತರಿಸುವಿರಾ ಎಂದು ಸಿದ್ದರಾಮಯ್ಯ ತಮ್ಮ ಟ್ವೀಟರ್ ನಲ್ಲಿ ಪ್ರಶ್ನಿಸಿದ್ದಾರೆ.
ಸಂಘ ಪರಿವಾರ ಜಾತಿ ಸಮಾವೇಶಕ್ಕೆ ಪ್ರಾಯೋಜಕತ್ವ ನೀಡುತ್ತಿದೆ -ಸಿದ್ದರಾಮಯ್ಯ

