ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ 8 ಸಾವಿರ ಸ್ಮಾರ್ಟ್‍ಕ್ಲಾಸ್ ರೂಂ; ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಟ್ಯಾಬ್ -ಡಿಸಿಎಂ

ಬೆಂಗಳೂರು: ಕೊವಿಡೋತ್ತರ ಕಾಲದಲ್ಲಿ ಡಿಜಿಟಲ್ ಕಲಿಕೆಯನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‍ಕ್ಲಾಸ್ ರೂಮುಗಳನ್ನಾಗಿ
ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.
ಬೆಂಗಳೂರು ಕಲಾ ಕಾಲೇಜ್‍ನಲ್ಲಿ ಗುರುವಾರ ನೂತನ ಜಿಮ್ ಹೌಸ್ ಹಾಗೂ ವಾರ್ಷಿಕ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.
2,500 ತರಗತಿ ಕೊಠಡಿಗಳು ಸ್ಮಾರ್ಟ್ ಕ್ಲಾಸ್‍ಗಳು ಆದ ನಂತರ ಮುಂಬರುವ 6 ತಿಂಗಳಲ್ಲಿ ಇನ್ನೂ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‍ಕ್ಲಾಸ್ ರೂಮುಗಳಾಗಿ ರೂಪಿಸಲಾಗುವುದು ಎಂದರು.
ಹೈಸ್ಪೀಡ್ ಇಂಟರ್‍ನೆಟ್, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‍ಕ್ಲಾಸ್ ರೂಂ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್ ಮಾಡಬಹುದು ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.
ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಡಿಸಿಎಂ ತಿಳಿಸಿದರು.
ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ವರ್ಷಕ್ಕೆ ಒಟ್ಟು 7 ಲಕ್ಷ ಉದ್ಯೋಗ ಸೃಷ್ಟಿ ನಮ್ಮ ಬೆಂಗಳೂರಿನಲ್ಲಿ ಆಗುತ್ತಿದೆ ಎಂದ ಅವರು ಬೆಂಗಳೂರು ನಾಲೆಜ್ ಸಿಟಿ ಮಾತ್ರವಲ್ಲದೆ ಆವಿಷ್ಕಾರಕ್ಕೂ ಹೆಚ್ಚು ಒತ್ತಾಸೆ ನೀಡುತ್ತಿರುವುದರಿಂದ ಇದು ಸಾಧ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪೆÇ್ರ.ಕೋಡದ ರಾಜಶೇಖರಪ್ಪ, ಡಾ. ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.