ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು 2021-22ನೇ ಸಾಲಿನ ಬಜೆಟ್ ಅನ್ನು ಮಾ. 8ರಂದು ಮಂಡಿಲಿದ್ದಾರೆ.
ವಿಧಾನಸಭೆಯಲ್ಲಿ ಮಾ. 8ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು.
ಮಾ. 4ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮಾ. 8ರಂದು ಬಜೆಟ್ ಮಂಡನೆಯಾಗಲಿದೆ ಎಂದವರು ತಿಳಿಸಿದರು.
ಸಿಎಂರಿಂದ ಮಾ. 8ರಂದು ಬಜೆಟ್ ಮಂಡನೆ

