ಬೆಂಗಳೂರು: ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮೈಸೂರು ಮೇಯರ್ ಚುನಾವಣೆ ಸಂಬಂಧ ಡಿಕೆ ಶಿವಕುಮಾರ್ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಅದಕ್ಕಾಗಿ ಯಾರ ಜೊತೆ ಬೇಕಾದರೂ ಮಾತನಾಡುತ್ತೇನೆ. ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ. ನಮಗೆ ಪಕ್ಷದ ತತ್ವ, ನಿಲುವು ಮುಖ್ಯ ಎಂದರು.
ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್ ಗೆ 2 ವರ್ಷ ಹಾಗೂ ಜೆಡಿಎಸ್ ಗೆ 3 ವರ್ಷ ಮೇಯರ್ ಸ್ಥಾನ ಎಂದು ನಿರ್ಧರಿಸಲಾಗಿತ್ತು. ಆ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿದೆ ಎಂದು ನಾವು ಭಾವಿಸಿದ್ದೇವೆ. ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ ಎಂದರು.
ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ -ಡಿಕೆಶಿ

