ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಬಿಜೆಪಿ ಮುಖಂಡ ಸೇರಿ ಇಬ್ಬರ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇರಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ಸೇರಿದಂತೆ ಇಬ್ಬರನ್ನು ಪೆÇಲೀಸರು ಗುರುವಾರ ಬಂಧಿಸಿದ್ದಾರೆ.
ಪ್ರಮುಖ ಆರೋಪಿ ನಾಗರಾಜ್ ಮತ್ತು ಗಣೇಶ್ ಬಂಧಿತರು.
ಇವರಿಬ್ಬರ ಬಂಧನ ಸೇರಿ ಈ ವರೆಗೂ ಪೊಲೀಸರು 7 ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ.
ರಾಘವೇಂದ್ರ ರೆಡ್ಡಿ, ವೆಂಕಟಶಿವ ರೆಡ್ಡಿ, ಪ್ರವೀಣ್, ರಿಯಾಜ್ ಹಾಗೂ ಮಧುಸೂಧನ್ ನನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಇನ್ನು 5 ಮಂದಿ ಆರೋಪಿಗಳಿಗೆ ಪೆÇಲೀಸರು ಹುಡುಕಾಟ ನಡೆಸಿದ್ದಾರೆ.
ಭ್ರಮರಾ ವಾಸಿನಿ ಸ್ಟೋನ್ ಲಿಮಿಟೆಡ್ ಗೆ ಸೇರಿದ ಜೆಲ್ಲಿ ಕ್ರಷರ್ ನಲ್ಲಿ ಸೋಮವಾರ ರಾತ್ರಿ ಜಿಲೆಟಿನ್ ಕಡ್ಡಿಗಳ ಸ್ಫೋಟ ಸಂಭವಿಸಿ 6 ಮಂದಿ ಸಾವನ್ನಪ್ಪಿದ್ದರು.