ಸಚಿವ ಡಾ. ಸುಧಾಕರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ

ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ರೇಣುಕಾಚಾರ್ಯ ಅವರು ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್‍ಗಳು ಫೆÇೀನೇ ರಿಸೀವ್ ಮಾಡಲ್ಲ ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಬಂದ ಎಲ್ಲ ಸಚಿವರು ಇದೇ ರೀತಿ ಮಾಡುತ್ತಿದ್ದಾರೆ ಎಂದು ನಾನು ಹೇಳುವುದಿಲ್ಲ. ಕೆಲ ಸಚಿವರು ಮಾತ್ರ ನಮಗೆ ಕೈಗೆ ಸಿಗೋದಿಲ್ಲ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹೊನ್ನಾಳಿ ಕ್ಷೇತ್ರದ ಕೆಲಸ ಮಾಡಿಸಿಕೊಡುವಂತೆ ನಾನು ಸಚಿವ ಡಾ. ಸುಧಾಕರ್ ಅವರನ್ನು ಹತ್ತಾರು ಭಾರಿ ಭೇಟಿ ಆಗಿದ್ದೇನೆ; ಪತ್ರ ಬರೆದಿದ್ದೇನೆ. ಆದರೂ ಏನೂ ಪ್ರಯೋಜನ ಆಗಿಲ್ಲ ಎಂದರು.