ನವದೆಹಲಿ- ಪಂಚರಾಜ್ಯಗಳ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಪಂಚರಾಜ್ಯಗಳ ಚುನಾವಣೆ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಸುನೀಲ್ ಅರೋರ ಈ ಶುಕ್ರವಾರ ಸುದಿಗೋಷ್ಠಿ ನಡೆಸಿ ವಿವರ ನೀಡಿದರು.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ಕರ್ನಾಟಕದ ಮೂರು ಕ್ಷೇತ್ರಗಳ ಮತದಾನಕ್ಕೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ 8 ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ಮಾ. 27, ಎರಡನೇ ಹಂತ ಏ. 1, ಮೂರನೇ ಹಂತ ಏ. 6, ನಾಲ್ಕನೇ ಹಂತ ಏ. 10, ಐದನೇ ಹಂತ ಏ. 17, ಆರನೇ ಹಂತ ಏ. 22, ಏಳನೇ ಹಂತ ಏ. 26 ಹಾಗೂ ಎಂಟನೇ ಹಂತದ ಮತದಾನ ಏ. 29ರಂದು ನಡೆಯಲಿದೆ.
ಅಸ್ಸಾಂನಲ್ಲಿ 126 ಕ್ಷೇತ್ರಗಳಿಗೆ 3 ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾ. 27ರಂದು ಮೊದಲ ಹಂತ, ಏ. 1ರಂದು ಎರಡನೇ ಹಂತ, ಏ. 6ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ.
ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಮೇ 6ರಂದು ಚುನಾವಣೆ ನಡೆಯಲಿದೆ.
ಕೇರಳ ವಿಧಾನಸಭೆಯಲ್ಲಿ 140 ಸ್ಥಾನಗಳಿಗೆ ಜೂ. 1ಕ್ಕೆ ಚುನಾವಣೆ ನಡೆಸಲಾಗುತ್ತದೆ.
ಪುದುಚೇರಿಯ 30 ಕ್ಷೇತ್ರಗಳಿಗೆ ಒಂದು ಹಂತದಲ್ಲಿ ಏ. 6ರಂದು ಚುನಾಣೆ ನಡೆಯಲಿದೆ.
824 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು 18.68 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಈ ಕ್ಷಣದಿಂದಲೇ ಐದು ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಐದು ರಾಜ್ಯಗಳ ಚುನಾವಣೆಯ ಫಲಿತಾಂಶ
ಮೇ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯುಕ್ತರಾದ ಸುನೀಲ್ ಅರೋರಾ ಅವರು ತಿಳಿಸಿದರು.
ಪಂಚರಾಜ್ಯಗಳ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರೋನಾ ಲಸಿಕೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

