ಧಾರವಾಡ: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಈ ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಖಾತೆಗಳ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ.24-ಗಣಿತ, ಜೂ. 28-ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇದೇ ಏಪ್ರಿಲ್ ಎರಡರಿಂದ ತಾವು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಸ್.ಎಸ್ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷಾ ಪೂರ್ವ ಸಿದ್ಧತೆಗಳನ್ನು ಸ್ವತಃ ಪರಿಶೀಲಿಸುವುದಾಗಿ ಹೇಳಿದರು.
ಸಚಿವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಅರುಣ ಶಹಾ ಪುರ, ಎಸ್.ವಿ.ಸಂಕನೂರು ಹಾಗೂ ಹಣಮಂತ ನಿರಾಣಿ ಮತ್ತು ಧಾರವಾಡದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಉಪಸ್ಥಿತರಿದ್ದರು.
SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

