ಇದೊಂದು ರಾಜಕೀಯ ಪಿತೂರಿ -ಸಚಿವ ಯೋಗೇಶ್ವರ್

ಮೈಸೂರು :  ಸಚಿವ ರಮೇಶ್ ಜಾರಕಿಹೊಳಿ ಸಿಡಿ  ವಿಚಾರ, ಇದೊಂದು ರಾಜಕೀಯ ಪಿತೂರಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು. 
ನಗರದಲ್ಲಿ  ಬುಧವಾರ ಅವರು ಮಾಧ್ಯಮ ಪ್ರತಿನಿಧಿಗಳೂಂದಿಗೆ  ಮಾತನಾಡಿದರು. 
ರಮೇಶ್ ಜಾರಕಿಹೊಳಿ ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ರೀತಿಯ ತಪ್ಪು ಮಾಡಿರುತ್ತಾರೆ ಅಂತ ಅನ್ನಿಸುತ್ತಿಲ್ಲ ಎಂದರು.
ನಾನು ಮೈಸೂರಿನಲ್ಲೇ ಇದ್ದೇನೆ. ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸತ್ಯಾಸತ್ಯತೆ ಪರಿಶೀಲನೆ ಆಗುವವರೆಗೂ ನೋಡೋಣ ಎಂದು ಸಚಿವರು ಹೇಳಿದರು. 
ಈ ವಿಚಾರದಲ್ಲಿ ನಾನು ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ಇದ್ದೇ‌ನೆ. ಈಗಾಗಲೇ ಅವರ ಜೊತೆ ಮಾತನಾಡಿದ್ದೇನೆ, ಅವರು ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಎಂದು ಸಚಿವ ಯೋಗೇಶ್ವರ್ ತಿಳಿಸಿದರು.