ಮೈಸೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ವಿಚಾರದಲ್ಲಿ ಈಗಲೇ ಏನನ್ನೂ ಹೇಳುವಂತಿಲ್ಲ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು .
ನಗರದಲ್ಲಿ ಬುಧವಾರ ಸಚಿವ ಜಗದೀಶ್ ಶೆಟ್ಟರ್ ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಈ ವಿಚಾರದಲ್ಲಿ ನನ್ನ ಪಾತ್ರ ಏನೂ ಇಲ್ಲ ಅಂತ ಹೇಳಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಲಿ. ಸತ್ಯಾಸತ್ಯತೆ ಏನು ಅಂತ ಗೊತ್ತಾಗಲಿ ಎಂದರು.
ಕ್ಯಾಬಿನೆಟ್ ಮೀಟಿಂಗ್ ಇದೆ. ಅವರು ಬರ್ತಾರಾ ಸಿಎಂ ಭೇಟಿ ಮಾಡ್ತಾರ ಅಂತ ನೋಡುತ್ತೇವೆ. ಈ ವಿಚಾರದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

