ರಾಸಲೀಲೆ ವಿಡಿಯೋ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು:  ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ಸಚಿವ ರಮೇಶ್ ಜಾರಕಿಹೊಳಿ  ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ಹಾಗೂ ಯುವತಿಯೊಂದಿಗಿದ್ದ ವಿಡಿಯೋ ಹಾಗೂ ಅವರುಗಳು ಮಾತನಾಡಿರುವ ಆಡಿಯೋದೊಂದಿಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 
ಈ ವಿಚಾರ ಬಹಿರಂಗವಾಗುತ್ತಿದ್ದಂತೆ ವಿಪಕ್ಷಗಳು ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿದರು.  ಸಿಎಂ ಬಿಎಸ್ ಯಡಿಯೂರಪ್ಪಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. 
ಆರೋಪಮುಕ್ತರಾದ ಬಳಿಕ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ಎಂದು  ತಿಳಿದು ಬಂದಿದೆ.