ಬೆಂಗಳೂರು: ಬಿಎಸ್. ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪನವರು ಮಾ. 8ರಂದು ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಇನ್ನು ಬಿಎಸ್ ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
2020ರಲ್ಲಿ 7ನೇ ಬಾರಿಗೆ ಬಜೆಟ್ ಮಂಡಿಸಿದ್ದರು.
ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದರು. ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಅನ್ನು ಯಡಿಯೂರಪ್ಪನವರು ಮಂಡಿಸಿದ್ದರು.
2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಾ. 8ರಂದು ಮಂಡಿಸುವುದಾಗಿ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.

