ಬೆಂಗಳೂರು: ಆರ್ಥಿಕ ಸಂಕಷ್ಟದ ಸಮಯದಲ್ಲಿ ಸರ್ವರಿಗೂ ಲೇಸನ್ನೇ ಬಯಸುವ ಬಜೆಟ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬಜೆಟ್ ಬಗ್ಗೆ ಸಚಿವರು ಸೋಮವಾರ ಪ್ರತಿಕ್ರಿಯೆ ನೀಡಿ, ಕೋವಿಡ್ ಇದ್ದ ಕಾರಣಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಂಪನ್ಮೂಲ ಸಂಗ್ರಹ ಆಗಿಲ್ಲ. ಹೀಗಾಗಿ ಸಿಎಂ ಅವರು ಸಂಪನ್ಮೂಲಗಳ ಇತಿ-ಮಿತಿಯಲ್ಲೇ ಕ್ಷೇತ್ರ, ಜಾತಿವಾರು ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದಾರೆಂದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಹಜವಾಗಿಯೇ ಇನ್ನೂ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಸೀಮಿತ ಸಂಪನ್ಮೂಲದಲ್ಲಿಯೇ ಅನುದಾನ ಹಂಚಿಕೆ ಮಾಡಿದ್ದಾರೆ ಮುಖ್ಯಮಂತ್ರಿಯವರು ಎಂದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಡಾ. ಸುಧಾಕರ್ ತಿಳಿಸಿದ್ದಾರೆ.
ಸರ್ವರಿಗೂ ಲೇಸು ಬಯಸುವ ಬಜೆಟ್ -ಸಚಿವ ಡಾ.ಕೆ.ಸುಧಾಕರ್

