ನನ್ನನ್ನ ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ -ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು: ನನ್ನನ್ನ ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಂಗಳವಾರ ರಮೇಶ್ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ ಸಂಬAಧ ಮಾತನಾಡಿದ ಅವರು ಇದು ನೂರಕ್ಕೆ ನೂರರಷ್ಟು ನಕಲಿ ಸಿಡಿ. ನಾನು ಅಪರಾಧಿಯಲ್ಲ. ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಬೆಂಗಳೂರಿನ ಯಶವಂತಪುರದ ಪೊಲೀಸ್ ಠಾಣೆ ಅಕ್ಕಪಕ್ಕದಲ್ಲಿ ನಾಲ್ಕನೇ ಮಹಡಿ ಹಾಗೂ ಒರಾಯನ್ ಮಾಲ್ ಅಕ್ಕಪಕ್ಕದಲ್ಲಿ ಐದನೇ ಮಹಡಿಯಲ್ಲಿ ಈ ಷಡ್ಯಂತ್ರ ನಡೆದಿದೆ. ಸಿಡಿ ಮಾಡಲು ನೂರಾರು ಕೋಟಿ ಖರ್ಚು ಮಾಡಿದ್ದಾರೆ ಎಂದರು.
ಯುವತಿಗೆ 50 ಲಕ್ಷ ಅಲ್ಲ 5 ಕೋಟಿ ನೀಡುರುವ ಮಾಹಿತಿ ಇದೆ. ಆಕೆಗೆ ವಿದೇಶದಲ್ಲಿ ಒಂದು ಅಪಾರ್ಟ್ಮೆಂಟ್ ಕೂಡ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಅದು ಸ್ಪಷ್ಟವಾಗಿ ಹೇಳಲಾಗುವುದಿಲ್ಲ ಎಂದು ಹೇಳಿದ ಅವರು ಈ ಸಿಡಿ 4 ತಿಂಗಳ ಮೊದಲೇ ಮಾಡಿರುವುದು ಎಂದರು.
ಈ ಸಿಡಿ ಹಿಂದೆ 2+3+4 ಮಂದಿ ಕುತಂತ್ರದಿAದ ಕೆಲಸ ಮಾಡಿದ್ದಾರೆ. ಸಿಡಿ ಬಿಡುಗಡೆಗೆ 24 ತಾಸು ಮೊದಲೇ ದೆಹಲಿಯಿಂದ ನಮ್ಮವರೊಬ್ಬರು ಫೋನ್ ಮಾಡಿದ್ದರು. ಆದರೆ, ನಾನು ತಪ್ಪು ಮಾಡಿಲ್ಲದ್ದರಿಂದ ಧೈರ್ಯವಾಗಿದ್ದೆ ಎಂದು ಜಾರಕಿಹೊಳಿ ಹೇಳಿದರು.
ಕಳೆದ ವರ್ಷ ಫೆಬ್ರವರಿಯಲ್ಲಿ ನಾನು ಸಚಿವನಾಗಿದ್ದೆ. ಆಗ ಒಬ್ಬ ಮಹಾನ್ ನಾಯಕ ನನಗೆ ಚಾಲೆಂಜ್ ಹಾಕಿದ್ದ. ಇಲಾಖೆಯನ್ನ ಕೇವಲ 3 ತಿಂಗಳು ನಡೆಸ್ತಾನೆಂದಿದ್ದ. ನಾನು ರಾಜ್ಯವೇ ಮೆಚ್ಚುವಂತೆ ಇಲಾಖೆ ನಡೆಸಿದ್ದೆ. ಹೀಗಾಗಿ ನನ್ನ ವಿರುದ್ದ ಆಮಹಾನ್ ನಾಯಕ ಷಡ್ಯಂತ್ರ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ನನ್ನ ಕುಟುಂಬದ ಮರ್ಯಾದೆ ಹೋಗಿದೆ. ಅದು ವಾಪಸ್ ಬರಬೇಕು. ಕುಟುಂಬದ ಮರ್ಯಾದೆ ಮುಖ್ಯ. ರಾಜಕಾರಣವಲ್ಲ. ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ. ರಾಜಕಾರಣಕ್ಕೆ ಬರ್ತೀನೋ ಇಲ್ವೋ ಗೊತ್ತಿಲ್ಲ. ಆದರೆ ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನ ಜೈಲಿಗೆ ಕಳಿಸದೇ ಬಿಡಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ನಾನು ಬಹಳ ದುಃಖದಲ್ಲಿದ್ದೇನೆ. ನಾಲ್ಕೈದು ದಿನಗಳಿಂದ ಎಲ್ಲಾ ಬೆಳವಣಿಗೆ ನೋಡಿದ್ದೇನೆ. ರಾಜೀನಾಮೆ ನೀಡಿದ್ದು ನನ್ನ ವೈಯಕ್ತಿಕ ನಿರ್ಧಾರ ಎಂದವರು ತಿಳಿಸಿದರು.
ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ ಕರೆ ಮಾಡಿ ಧೈರ್ಯ ಹೇಳಿದರು. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.